ಔರಾದ್ : ಪಟ್ಟಣದ ಯುವಕನೊಬ್ಬ 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಬುಧವಾರ ಔರಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ 30 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕಿ ಹಾಗೂ ಯುವಕ ಒಂದೇ ಬಡಾವಣೆಯಲ್ಲಿ ವಾಸವಿದ್ದು, ಬಾಲಕಿ ಕುಟುಂಬಸ್ಥರಿಗೂ ಮತ್ತು ಯುವಕನಿಗೆ ಪರಿಚಯವಿತ್ತು. ಯುವಕ ಆಗಾಗ ಬಾಲಕಿ ಜತೆ ಅನುಚಿತವಾಗಿ ವರ್ತಿಸುತ್ತಿದ್ದ. ಈ ಕುರಿತು ಬಾಲಕಿ ಪಾಲಕರಲ್ಲಿ ವಿಷಯ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


