ಬೀದರ್: 9ನೇ ತರಗತಿಯ ಬಾಲಕಿ ಮೇಲೆ ಶಿಕ್ಷಕನೊರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ನೀಡಿದ ದೂರಿನ ಮೇರೆಗೆ ಆ.28ರಂದು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಗ್ರಾಮವೊಂದರಲ್ಲಿ ಬಾಲಕಿಯು ಶಾಲೆಗೆ ಹೋದಾಗ, ಶಿಕ್ಷಕನೊರ್ವ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಶಿಕ್ಷಕನು ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಾಲಕಿಯು ತನ್ನ ಪೋಷಕರಿಗೆ ಈ ವಿಷಯ ತಿಳಿಸುತ್ತೇನೆ ಎಂದಾಗ ಶಿಕ್ಷಕ, ನಿನ್ನ ತಂದೆಯನ್ನು ಕೊಲೆ ಮಾಡುತ್ತೇನೆ ಎಂದು ಬಾಲಕಿಯನ್ನು ಹೆದರಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಬಾಲಕಿಯು ಶಾಲೆಗೆ ಹೋಗುವುದಿಲ್ಲ ಎಂದು ಅಳುತ್ತಾ ಹಠ ಹಿಡಿದಿದ್ದಾಗ ಪೋಷಕರು ಈ ಕುರಿತು ಬಾಲಕಿಯ ಬಳಿ ವಿಚಾರಿಸಿದಾಗ ಬಾಲಕಿಯು ಘಟನೆಯನ್ನು ವಿವರಿಸಿದ್ದಾಳೆ ಎಂದು ತಿಳಿದು ಬಂದಿದೆ.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


