ಬೀದರ್: ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ನಡೆದಿದೆ.
ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತಪಟ್ಟವರಾಗಿದ್ದಾರೆ. ಮೃತರಿಗೆ ಪತ್ನಿ,ಪುತ್ರಿ, ಇಬ್ಬರು ಪುತ್ರರಿದ್ದಾರೆ.
ವೃತ್ತಿಯಲ್ಲಿ ವೈದ್ಯರಾಗಿದ್ದ ನೀಲಕಂಠ ರಾವ್ ಅವರು ಸಂತಪೂರ ಗ್ರಾಮದಲ್ಲಿ ಆಸ್ಪತ್ರೆ ನಡೆಸುತ್ತಿದ್ದರು. ಸೋಮವಾರ ಬೆಳಿಗ್ಗೆ ಬೀದರ್ ನಿಂದ ಸಂತಪೂರ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದರು. ಈ ವೇಳೆ ಔರಾದ್ ಕಡೆಯಿಂದ ಬರುತ್ತಿದ್ದ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ –161ಎ ರಲ್ಲಿ ಪ್ರಗತಿಯಲ್ಲಿರುವ ಟೋಲ್ ಗೇಟ್ ಸಮೀಪ ಘಟನೆ ನಡೆದಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂತಪೂರ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತಪೂರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4