ಬೀದರ್: ಜಿಲ್ಲೆಯ ಔರಾದ ತಾಲೂಕಿನ ಕೌಠಾ (ಬಿ) ಗ್ರಾಮದ ಓಂಕಾರ ಅಪ್ಪಾರಾವ ಗಾದಗೆ ಎಂಬುವರ ಮನೆಗೆ ನುಗ್ಗಿದ ಇಬ್ಬರು ಮುಸುಕುಧಾರಿಗಳು ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಓಂಕಾರ ಹಾಗೂ ಅವರ ತಂದೆ ಅಪಾರಾವ್ ಮನೆಯಲ್ಲಿ ಇರಲಿಲ್ಲ ಮನೆಯಲ್ಲಿ ಓಂಕಾರ ಅವರ ಪತ್ನಿ ಪ್ರೀತಿ ಒಬ್ಬರೇ ಇದ್ದರು. ಮನೆಯ ಹಿಂಬಾಗಿಲಿನಿಂದ ನುಗ್ಗಿದ ಇಬ್ಬರು ಮುಸುಕುಧಾರಿಗಳು ಪ್ರೀತಿ ಅವರ ಮೇಲೆ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ದರೋಡೆ ಮಾಡಿದ್ದಾರೆ ಎಂದು ಕುಂಟುಬದ ಮೂಲಗಳಿಂದ ತಿಳಿದು ಬಂದಿದೆ.
ದರೋಡೆಕೋರರ ಹಲ್ಲೆಯಿಂದ ಗಾಯಗೊಂಡ ಪ್ರೀತಿ ಗಾದಗೆ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿದು ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್,ಸಂತಪೂರ ಠಾಣೆ ಪಿಎಸ್ಐ ನಂದಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ .
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4