ಬೀದರ್ : ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲ್ಲೂಕಿನ ಗೋಕುಳ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತುಕಾರಾಮ್ ವಗ್ಗೆ (26) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಿಗ್ಗೆ ಯುವಕನು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW