ಬೀದರ್: ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಡಾ. ಗಿರೀಶ ದಿಲೀಪ ಬದೋಲೆ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಶುಕ್ರವಾರ ಆದೇಶ ಹೊರಡಿಸಿದೆ.
ಗಿರೀಶ ಬದೋಲೆ ಅವರು 2023ರ ಡಿಸೆಂಬರ್ ನಲ್ಲಿ ಬೀದರ್ ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕಗೊಂಡಿದ್ದರು.
ಅವರ ತೆರವಾದ ಜಾಗಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿತ್ತೆ ಮಾಧವ ವಿಠಲರಾವ್ ಅವರನ್ನು ಬೀದರ್ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
