ಬೆಂಗಳೂರು: ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ ಬಳಿಕ ಏಳು ಜನ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳಿಂದ 219 ಎಕ್ಸೈಸಿ ಪಿಲ್ಸ್, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್ 130 ಗ್ರಾಂ ತೂಕದ ಚರಸ್, 100.88 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಪುಲಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.


