ಬೆಂಗಳೂರು: ಮುಡಾ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ದೊರಕಿದ್ದು, ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎನ್ನುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.
ಸದ್ಯ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ದೊರಕಿದೆ. ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಸದ್ಯ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದು ತೀರ್ಪು ಪ್ರಕಟಿಸಿದ್ದಾರೆ.
ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮೈಸೂರಿನ ಹೃದಯ ಭಾಗದಲ್ಲಿನ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ ಪೊಲೀಸರಲ್ಲದೆ, ಜಾರಿ ನಿರ್ದೇಶನಾಲಯವೂ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx