ಬೆಂಗಳೂರು: ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬೆಂಗಳೂರಿನ 42ನೇ ACMM ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ರೂಪಾಯಿಗಳ ಬಾಂಡ್ ಇಬ್ಬರು ಶೂರಿಟಿ ಒದಗಿಸುವಂತೆ ಷರತ್ತು ವಿಧಿಸಿ ಶಾಸಕ ಮುನಿರತ್ನಗೆ 42ನೇ ACMM ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಾಕ್ಷಾಧಾರ ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ. ಸದ್ಯ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಮುನಿರತ್ನ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಆದರೆ ಈ ನಡುವೆ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಕೂಡ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನಿರತ್ನ ಬಿಡುಗಡೆಯಾದರೂ ಮತ್ತೆ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296