ನವದೆಹಲಿ: ದೇಶದಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಇಂದಿನ ವಹಿವಾಟು ಆರಂಭದಲ್ಲೇ ಚಿನ್ನದ ಬೆಲೆಯಲ್ಲಿ 500 ರೂಪಾಯಿ ಏರಿಕೆಯಾಗಿದ್ದು, 10 ಗ್ರಾಂಗೆ 72,200 ರೂ.ಗೆ ತಲುಪಿತ್ತು.
ಬೆಳ್ಳಿ ಬೆಲೆ 100 ರೂ.ಹೆಚ್ಚಳವಾಗಿದೆ. ಈ ಮೂಲಕ ಕೆಜಿಗೆ 92,000 ರೂ. ತಲುಪಿದೆ. ಎಂಸಿಎಕ್ಸ್ ನಲ್ಲಿ ಚಿನ್ನ 10 ಗ್ರಾಂಗೆ 549 ರೂ.ಗಳಷ್ಟು ಏರಿಕೆಯಾಗಿ 72,279 ರೂ.ಗಳಿಗೆ ತಲುಪಿತು. ಬೆಳ್ಳಿ 121 ರೂ. ಏರಿಕೆಯಾಗಿದ್ದು, ಪ್ರತಿ ಕೆಜಿಗೆ 92,154 ರೂ. ಆಗಿತ್ತು. ಸದ್ಯ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 72,550 ರೂ.ಗೆ ತಲುಪಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 66,240 ರೂ.ಗೆ ಆಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 72,100 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 66090 ರೂ. ಗೆ ತಲುಪಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


