ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿರುವ ‘ಗಿಲ್ಲಿ ನಟ’ (ನಟರಾಜ್) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶೇಷ ಗೌರವ ಸಲ್ಲಿಸಿದ್ದಾರೆ.
ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಗಿಲ್ಲಿ ನಟ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಟನಿಗೆ ಗಂಧದ ಹಾರ ಹಾಕಿ, ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಅಲ್ಲದೆ, ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದರು.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಫೋಟೋ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, “12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು ಮತ್ತು ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ,” ಎಂದು ಬರೆದುಕೊಂಡಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಅವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


