ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿಕೊಟ್ಟಿದ್ದ ಹಳ್ಳಿ ಹೈದ ಹನುಮಂತ ಬಿಗ್ ಬಾಸ್ ಟ್ರೋಫಿ ವಿಜೇತರಾಗಿದ್ದು, ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಮತ್ತು ರಜತ್ ಎಂಟ್ರಿ ನಂತರ ಮಂಜು ಉತ್ಸಾಹ ಕಳೆದುಕೊಂಡಿದ್ದರು.
ಬರಬರುತ್ತಾ ಅವರ ಆಟ ಮಂಕಾಯಿತು. ಇನ್ನು ಟಾಪ್ ನಾಲ್ಕರಲ್ಲಿ ಹನುಮಂತ, ರಜತ್, ತ್ರಿವಿಕ್ರಮ್ ಮತ್ತು ಮೋಕ್ಷಿತ ಇದ್ದರು. ಈ ಪೈಕಿ ಮೋಕ್ಷಿತ ಹೊರಬಂದರು. ಇನ್ನು ಟಾಪ್ ಮೂವರಲ್ಲಿ ಘಟಾನುಘಟಿಗಳೇ ಇದ್ದರು. ಆದರೆ ರಜತ್ 2ನೇ ರನ್ನರ್ ಅಪ್ ಆಗಿ ಹೊರಬಂದರು. ಅಂತಿಮವಾಗಿ ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಅವರು ಹನುಮಂತ ಮತ್ತು ತ್ರಿವಿಕ್ರಮ್ ಅವರ ಕೈಗಳನ್ನು ಹಿಡಿದು ಹನುಮಂತನ ಕೈ ಅನ್ನು ಎತ್ತುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರನ್ನು ಘೋಷಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4