ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್ ನಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ಹಾಗೂ ಹಾಸ್ಯನಟ ಮುನಾವರ್ ಫಾರೂಕಿ ಅವರನ್ನು ನಿನ್ನೆ ತಡರಾತ್ರಿ ಮುಂಬೈ ಪೊಲೀಸರು ವಶಕ್ಕೆ ಪಡೆದ್ದಾರೆ.
ಇದೀಗ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಯ ಪ್ರಕಾರ, ಮುಂಬೈ ಪೊಲೀಸ್ ಸಮಾಜ ಸೇವಾ ಶಾಖೆಯು ‘ಸಬಲನ್ ಹುಕ್ಕಾ ಬಾರ್’ ಮೇಲೆ ದಾಳಿ ನಡೆಸಿತ್ತು. ತಂಬಾಕು ಆಧಾರಿತ ಹುಕ್ಕಾ ಬಳಕೆ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಮುಂಬೈ ಪೊಲೀಸರು ಹುಕ್ಕಾಬಾರ್ ಮೇಲೆ ದಾಳಿ ಮಾಡಿದ್ದರು ಎನ್ನಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296