ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿರುವ ಬೆನ್ನಲ್ಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಸಂಸದರು ಹಾಗೂ ಶಾಸಕರ ಮಹತ್ವದ ಸಭೆ ಕರೆದಿದ್ದಾರೆ.
ಜೆಡಿಯುಗೆ ಆರ್.ಪಿ.ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಈ ಸಭೆ ಕರೆದಿರುವುದು ಕುತೂಹಲ ಕೆರಳಿಸಿದೆ. ಜೆಡಿಯು, ಎನ್‌ಡಿಎ ಅಂಗಪಕ್ಷವಾಗಿದ್ದರೂ ಸರ್ಕಾರದಿಂದ ದೂರ ಉಳಿದಿದೆ. ನಿತೀಶ್ ಕುಮಾರ್ ಅವರು ಕೇಂದ್ರ ಸರ್ಕಾರ ಸರ್ಕಾರ ನೀಡುತ್ತಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ನಿನ್ನೆ ದೆಹಲಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಗೂ ನಿತೀಶ್ ಕುಮಾರ್ ಗೈರು ಹಾಜರಾಗಿದ್ದರು. ಇದು ರಾಜಕೀಯ ವಲಯಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಮತ್ತೊಂದೆಡೆ ಜೆಡಿಯುಗೆ ಆರ್.ಪಿ .ಸಿಂಗ್ ಗುಡ್ ಬೈ ಹೇಳಿದ್ದು ಬಿಹಾರ ಸಿಎಂ ವಿರುದ್ಧ ಆರೋಪ ಮಾಡಿದ್ದು ಕಳೆದ ವರ್ಷ ತಮ್ಮನ್ನು ಸಂಪರ್ಕಿಸದೆ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು ಎಂದು ಆರೋಪಿಸಿದ್ದಾರೆ.
ಜೆಡಿಯು ಪಕ್ಷದ ಅಂತರಿಕ ಜಗಳವನ್ನು ಬಿಜೆಪಿ ಮೇಲೆ ಗೂಬೆ ಕೂರಿಸಲಾಗುತ್ತಿದೆ. ತಮ್ಮ ಮತ್ತು ಜೆಡಿಯು ನಡುವೆ ಸಂಬಂಧ ಚೆನ್ನಾಗಿದೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜು ರಂಜನ್ ಸಿಂಗ್, ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗಿರುವುದರಿಂದ ಬಿಜೆಪಿ ಜೊತೆಗಿನ ಸಂಬಂಧ ಹದಗೆಟ್ಟಿದೆ ಎಂಬ ವದಂತಿಗಳನ್ನು ತಳ್ಳಿ ಹಾಕಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz