ಬೆಳಗಾವಿ: ಯಲ್ಲಮ್ಮನ ಗುಡ್ಡಕ್ಕೆ ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮರಕ್ಕೆ ಡಿಕ್ಕಿಯಾಗಿ 6 ಜನ ಸಾವನ್ನಪ್ಪಿದ್ದ ಭೀಕರ ಘಟನೆ ರಾಮದುರ್ಗ ತಾಲ್ಲೂಕಿನ ಚಿಂಚನೂರು ಗ್ರಾಮದ ವಿಠ್ಠಲ ದೇವಸ್ಥಾನದ ಹತ್ತಿರ ನಡೆದಿದೆ.
ಗೂಡ್ಸ್ ವಾಹನ ಆಲದ ಮರಕ್ಕೆ ಗುದ್ದಿದ್ದರಿಂದ ಸ್ಥಳದಲ್ಲಿ ಐವರು ಮತ್ತು ಆಸ್ಪತ್ರೆಯಲ್ಲೊಬ್ಬರು ಅಸುನೀಗಿದ್ದಾರೆ.ಮೃತರನ್ನು ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ನಿವಾಸಿಗಳಾದ ಹನಮವ್ವ (25), ದೀಪಾ (32), ಸವಿತಾ(17), ಸುಪ್ರಿತಾ(11), ಮಾರುತಿ (42), ಇಂದರವ್ವಾ (24) ಎಂದು ಗುರುತಿಸಲಾಗಿದೆ.
ಇವರು ಮಧ್ಯ ರಾತ್ರಿ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಯಾತ್ರಾರ್ಥಿ ಗಳ ವಾಹನ ಅಪಘಾತವಾಗಿ 6 ಜನ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಭೇಟಿ ನೀಡಿದ್ದಾರೆ. ಪ್ರಕರಣ ಕಟಕೋಳ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


