ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಮೋದಿನಗರದ ಉಮೇಶ್ ಶರ್ಮಾ ಎಂಬ ವ್ಯಕ್ತಿ ತನ್ನ ಬಾಡಿಗೆ ಮನೆಯಲ್ಲಿದ್ದ ಪಿಎಚ್‌ಡಿ ವಿದ್ಯಾರ್ಥಿ ಅಂಕಿತ್ ಗೋಖರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಶವವನ್ನು ತುಂಡು ತುಂಡಾಗಿ ಕತ್ತರಿಸಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾರೆ.
ಘಟನೆ ಅಕ್ಟೋಬರ್ 5 ರಂದು ನಡೆದಿದೆ. ಇತ್ತೀಚೆಗಷ್ಟೇ ಈ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಉಮೇಶ್ ಶರ್ಮಾ ಮತ್ತು ಆತನ ಸ್ನೇಹಿತ ಪರ್ವೇಶ್ ನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
100 ರೂ.ಗಾಗಿ ಉಮೇಶ್ ಶರ್ಮಾ ಪಿಎಚ್‌ಡಿ ವಿದ್ಯಾರ್ಥಿ ಅಂಕಿತ್‌ನನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಮನೆಯಲ್ಲಿ ದೇಹವನ್ನು ವಿರೂಪಗೊಳಿಸಲು ಬಳಸಿದ ಮರ, ಸುಟ್ಟ ಬಟ್ಟೆ, ಅಂಕಿತ್‌ನ ಕೂದಲು ಮತ್ತು ರಕ್ತದ ಕಲೆಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಅಂಕಿತ್ ಸ್ನೇಹಿತರು 3 ವಾರಗಳಿಂದ ಕರೆ ಮಾಡುತ್ತಿದ್ದರೂ ಅವರು ಸ್ವೀಕರಿಸಲಿಲ್ಲ. ಬಳಿಕ ಪೊಲೀಸರಿಗೆ ದೂರು ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy