ಉಡುಪಿ : ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಾರು ಗ್ರಾಮದಲ್ಲಿ ನಡೆದಿದೆ.
ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಗರಾಜು (40), ಪತ್ನಿ ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy