ದಾವಣಗೆರೆ: ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ. ಸಂತೋಷ(26) ಮೃತಪಟ್ಟ ಸವಾರನಾಗಿದ್ದಾನೆ.
ಕಾರ್ ನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ಬೈಕ್ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಚನ್ನಗಿರಿ ಕಡೆಯಿಂದ ಸಂತೆ ಬೆನ್ನೂರಿಗೆ ಬರುತ್ತಿದ್ದ ಕಾರು ಹಾಗೂ ಎದುರು ಬರುತ್ತಿರುವ ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿದ್ದು, ಬಳಿಕ ಕಾರು ಮತ್ತು ಬೈಕ್ ಗಳು ರಸ್ತೆಯಿಂದ ಕೆಳಗಿನ ಗುಂಡಿಗೆ ಬಿದ್ದಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಂತೆಬೆನ್ನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


