ಬೆಂಗಳೂರು: ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಆರ್ ಪುರ ನಿವಾಸಿ ಪ್ರಕಾಶ್(35) ಸಾವಿಗೀಡಾದ ಬೈಕ್ ಸವಾರನಾಗಿದ್ದಾನೆ.
ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ನಿಂತಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರು ಡೋರ್ ತೆಗೆದು ನಿಂತಿದ್ದು, ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಕೂಡಲೆ ಕೆಆರ್ ಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೇ, ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296