ಹಾವೇರಿ: ಬೈಕ್ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಕಳೆದ ರಾತ್ರಿ ನಡೆದಿದೆ.
ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಈ ಮೂವರು ಕಳೆದ ರಾತ್ರಿ ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕತ್ತಲಲ್ಲಿ ಎತ್ತಿನಗಾಡಿ ಕಾಣದ ಹಿನ್ನೆಲೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ರಸ್ತೆಗೆ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4