ತಿಪಟೂರು: KSRTC ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಬಳಿ ನಡೆದಿದೆ.
ಅಯ್ಯನಭಾವಿ ನಿವಾಸಿಗಳಾದ ಉಮೇಶ್ (32) ರಜನಿಕಾಂತ್ (33) ಮೃತಪಟ್ಟ ಯುವಕರು ಎಂದು ತಿಳಿದು ಬಂದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಯುವಕರು ಮತಿಹಳ್ಳಿ ಗ್ರಾಮದಿಂದ ಕೆಲಸ ಮುಗಿಸಿ ತಮ್ಮ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಇದೇ ವೇಳೆ ತಿಪಟೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ KSRTC ಬಸ್ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ವೇಳೆ ತಲೆಗೆ ಗಂಭೀರವಾದ ಏಟು ತಗುಲಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸದ್ಯದ ಮಾಹಿತಿಗಳ ಪ್ರಕಾರ, ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW