ಮಧುಗಿರಿ: ದ್ವಿಚಕ್ರವಾಹನದಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ತಾಲೂಕಿನ ಕೊಡಿಗೆನಹಳ್ಳಿ ಹೋಬಳಿಯ ಹಿಂದೂಪುರ ರಸ್ತೆಯಲ್ಲಿರುವ ಜಿ.ಹೊಸಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು, ಪೋಲೇನಹಳ್ಳಿ ಗ್ರಾಮದ ಲಕ್ಷ್ಮೀ ನಾರಾಯಣಪ್ಪ ಬಿನ್ ಚಿಕ್ಕ ನರಸಯ್ಯ (53) ಎಂಬವರು ಮೃತಪಟ್ಟಿದ್ದಾರೆ.
ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಕಾಣಿಕೆ ನೀಡಿ ಹಿಂತಿರುಗುವಾಗ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಸ್ಥ
ಳಕ್ಕೆ ಸಿಪಿಐ ಹನುಮಂತರಾಯಪ್ಪ ಹಾಗೂ ಪಿಎಸ್ ಐ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


