ತಿಪಟೂರು: ವಾಹನಗಳನ್ನು ಕಳವು ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ತಿಪಟೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ವಾಹನಗಳನ್ನು ಬೆಂಗಳೂರು, ಹೊಸದುರ್ಗ, ಶಿವಮೊಗ್ಗ ,ತರೀಕೆರೆ, ದಾವಣಗೆರೆ ಸೇರಿದಂತೆ ಹಲವು ಕಡೆ ಕಳ್ಳತನ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಂಬರ್ ಪ್ಲೇಟ್ ಇಲ್ಲದೆ ಓಡಿಸುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದು, ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಬೈಕ್ ಕಳವು ಜಾಲದ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ಭದ್ರಾವತಿ, ಸಂಜಯ್, ಕಾರ್ತಿಕ್, ಉಮೇಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಿಂದ 10 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಡಿವೈಎಸ್ಪಿ ಸಿದ್ದಾರ್ಥ ಗೋಯಲ್ , ನಗರ ಠಾಣೆ ಇನ್ಸ್ಪೆಕ್ಟರ್ ಶ್ರೀಶೈಲಮೂರ್ತಿ, ಸಬ್ ಇನ್ಸ್ಪೆಕ್ಟರ್ ದ್ರಾಕ್ಷಾಯಿಣಿ ಕೆ., ಎಸ್ ಐ ನಿಶಾ, ಅಹ್ಮದ್ ಎ., ಶ್ರೀರಾಮಣ್ ಪೇದೆಗಳಾದ ಶರತ್ ಕಾಂತರಾಜು ಇದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB