ಚಿತ್ರದುರ್ಗ: ಬೈಕ್ ಗಳ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ.
ಹೊಳಲ್ಕೆರೆಯ ಕುಕ್ಕವಾಡೇಶ್ವರ ದೇಗುಲದ ಬಳಿ ಈ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ರಂಗಾಪುರ ಗ್ರಾಮದ ಚಂದು(32), ಮಾಳೇನಹಳ್ಳಿ ಮನು, ಸತೀಶ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳಲ್ಲಿ ಬರುತ್ತಿದ್ದವರ ಮೇಲೆ ಕೆ.ಎಸ್ ಆರ್ ಟಿಸಿ ಬಸ್ ಹರಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy