ತುಮಕೂರು: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿ ಬಳಿ ತಡರಾತ್ರಿ ನಡೆದಿದೆ.
ಇಲ್ಲಿನ ಚೌಕೇನಹಳ್ಳಿ ಗ್ರಾಮದ ನಿವಾಸಿ 40 ವರ್ಷ ವಯಸ್ಸಿನ ಮೂಡ್ಲಯ್ಯ ಹತ್ಯೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ತಡ ರಾತ್ರಿ ತೋಟದಿಂದ ಮನೆಯ ಕಡೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಹತ್ಯೆಯ ಬಳಿಕ ರಸ್ತೆ ಬದಿಯ ಕಾಲುವೆಗೆ ಮೃತದೇಹವನ್ನು ಎಸೆದು ಹೋಗಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಗುಬ್ಬಿ ಸಿಪಿಐ ನಧಾಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ವ್ಯಕ್ತವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5