ಯಾದಗಿರಿ: ಯಾದಗಿರಿ ತಾಲೂಕಿನ ಕೊಟಗೇರಾ ಗ್ರಾಮದ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗುರುಮಠಕಲ್ ಪಟ್ಟಣದ ನಿವಾಸಿ ನರಸಪ್ಪ (48) ಮೃತ ದುರ್ದೈವಿಯಾಗಿದ್ದಾರೆ.
ಮೃತ ದುರ್ದೈವಿಯಾದ ನರಸಪ್ಪ ಬೈಕ್ ನಲ್ಲಿ ಯಾದಗಿರಿಯಿಂದ ಕೋಟಗೇರಾ ಗ್ರಾಮಕ್ಕೆ ತೆರಳುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ನರಸಪ್ಪ ನೆಲಕ್ಕೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ನರಸಪ್ಪ ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296