ಬೀದರ್: ಬೈಕ್ ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.
ಔರಾದ್ ತಾಲ್ಲೂಕಿನ ಬೆಳಕೋಣಿ (ಚೌಧರಿ) ಗ್ರಾಮದ ಆಕಾಶ ದಿಲೀಪ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತರಿಗೆ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ.
ಹುಮನಾಬಾದ್ ಕಡೆಯಿಂದ ಭಾಲ್ಕಿಗೆ ತೆರಳುತ್ತಿದ್ದ ಬಸ್, ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಮೇಲಿಂದ ಕೆಳಗೆ ಬಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಖಟಕಚಿಂಚೋಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4