ಗುಬ್ಬಿ: ತಾಲೂಕಿನ ಅಂಕಸಂದ್ರ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿ ಮುಂಬಡ್ತಿ ಹೊಂದಿದ ಡಾ.ಎಸ್.ಕೃಷ್ಣಪ್ಪ ವಿದ್ಯಾರ್ಥಿನಿಯರ ಮೆಚ್ಚಿನ ಶಿಕ್ಷಕರಾಗಿದ್ದು, ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿನಿಯರು ಶಿಕ್ಷಕರನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ಎಂಪ್ರೆಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ.
ನಿರಂತರ 22 ವರ್ಷಗಳಿಂದ ನಗರದ ಎಂಪ್ರೆಸ್ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಡಾ.ಕೃಷ್ಣಪ್ಪ ಅವರು ಇತ್ತೀಚೆಗಷ್ಟೇ ಹಂಪಿ ವಿವಿಯಿಂದ ಪಿ.ಹೆಚ್.ಡಿ. ಪದವಿ ಪಡೆದಿದ್ದರು. ಶಿಕ್ಷಕರ ಅತ್ಯಂತ ಸರಳ ಹಾಗೂ ಪ್ರಾಮಾಣಿಕ ಶಿಕ್ಷಕರೆಂದು ಇಲಾಖೆಯಲ್ಲಿ ಕೃಷ್ಣಪ್ಪ ಗುರುತಿಸಿಕೊಂಡಿದ್ದರು.
ಶಾಲೆಯಿಂದ ಬೀಳ್ಕೊಡುವ ಸಂದರ್ಭದಲ್ಲಿ ಶಿಕ್ಷಕರನ್ನು ಹೋಗ ಬೇಡಿ ಸರ್ ಎಂದು ತಬ್ಬಿಕೊಂಡು ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯರು ಹಾಗೂ ಶಾಲೆಯ ಸಹೋದ್ಯೋಗಿಗಳು ಕಣ್ಣೀರು ಹಾಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz