ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ-ಸಾಮೂಹಿಕ ಹತ್ಯೆ ಪ್ರಕರಣದ 11 ಜೀವಾವಧಿ ಅಪರಾಧಿಗಳ ಬಿಡುಗಡೆ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ವಿಶೇಷ ಪೀಠ ಇಂದು ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಲಿದೆ. ಬಿಲ್ಕಿಸ್ ಅವರೊಂದಿಗೆ ರಾಜಕೀಯ ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿದ ಅರ್ಜಿಗಳನ್ನೂ ಪೀಠವು ಪರಿಗಣಿಸುತ್ತದೆ.
2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಕುಟುಂಬದ ಏಳು ಸದಸ್ಯರನ್ನು ಕಗ್ಗೊಲೆ ಮಾಡಲಾಯಿತು. ಶಿಕ್ಷೆಗೊಳಗಾದ ಆರೋಪಿಗಳು ಕಳೆದ ವರ್ಷ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಕುರಿತು ಪರಿಶೀಲನೆ ನಡೆಸಿ ಮೇ 13ರಂದು ನಿರ್ಧಾರ ಕೈಗೊಳ್ಳುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಆದೇಶವನ್ನು ಕೆಲವು ಅರ್ಜಿಗಳಲ್ಲಿ ಪ್ರಶ್ನಿಸಲಾಗಿದೆ. ಬಿಲ್ಕಿಸ್ ಕೂಡ ಈ ಬೇಡಿಕೆಯೊಂದಿಗೆ ಮನವಿ ಸಲ್ಲಿಸಿದ್ದರು. ಆದರೆ, ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.
ಬಳಿಕ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಎರಡು ತಿಂಗಳ ನಂತರ ಸುಪ್ರೀಂ ಕೋರ್ಟ್ ಈ ವಿಷಯವನ್ನು ಪರಿಶೀಲಿಸುವಂತೆ ಕೇಳಿಕೊಂಡ ನಂತರ, ಗುಜರಾತ್ ಸರ್ಕಾರ ಎಲ್ಲಾ ಆರೋಪಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿತು. ಆಗಸ್ಟ್ 15 ರಂದು 11 ಆರೋಪಿಗಳನ್ನು ಬಿಡುಗಡೆ ಮಾಡಲಾಯಿತು.
ಜೈಲಿನಲ್ಲಿ ಆರೋಪಿಗಳ ಉತ್ತಮ ನಡವಳಿಕೆಯನ್ನು ಪರಿಗಣಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂಬುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವರಣೆ. ಶಿಕ್ಷೆಯ ಅವಧಿಯಲ್ಲಿ ಆರೋಪಿಗಳು ಒಟ್ಟು ಮೂರು ವರ್ಷಗಳ ಪೆರೋಲ್ ಪಡೆದರು.
ಆರೋಪಿಗಳು 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು. ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಜೈಲಿನಲ್ಲಿ ಆರೋಪಿಗಳ ನಡವಳಿಕೆ ಉತ್ತಮವಾಗಿದೆ ಎಂದು ಸರ್ಕಾರ ಹೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


