ಬ್ಯಾಂಕ್ ಹಾಗೂ ಎಟಿಎಂ ಕೇಂದ್ರಗಳಿಗೆ ಹೋಗದೇ ಕೇವಲ ಆಧಾರ್ ಬಳಸಿಕೊಂಡು ಹಣ ಪಡೆಯಲು ದೇಶದಲ್ಲಿ ಎಇಪಿಎಸ್ (ಆಧಾರ್ ಆಧಾರಿತ ಹಣ ಪಾವತಿ ವ್ಯವಸ್ಥೆ) ಜಾರಿಗೆ ತರಲಾಗಿದ್ದು, ಈ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿರುವ ಸೈಬರ್ ವಂಚಕರು ಜನರ ಖಾತೆಗಳಲ್ಲಿರುವ ಹಣ ದೋಚುತ್ತಿದ್ದಾರೆ.
ಉಪ ನೋಂದಣಾಧಿಕಾರಿ ಕಚೇರಿ ಸೇರಿದಂತೆ ಹಲವು ಕಡೆಯ ಕೆಲಸಗಳಿಗಾಗಿ ಆಧಾರ್ ಬಯೋಮೆಟ್ರಿಕ್ (ಬೆರಳಚ್ಚು) ಮಾಹಿತಿ ಹಂಚಿಕೊಳ್ಳುತ್ತಿರುವ ಜನರ ಖಾತೆಯಲ್ಲಿರುವ ಹಣ ಇವರ ಅರಿವಿಗೆ ಬಾರದಂತೆ ಕಡಿತವಾಗುತ್ತಿದೆ


