ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವಾಯುಸೇನೆ ಅಧಿಕೃತವಾಗಿ ತಿಳಿಸಿವೆ.
ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿತ್ತು.
ಘಟನೆಯಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಉಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಎಲ್ಲಾ 14 ಮಂದಿ ಮೃತಪಟ್ಟಿದ್ದಾರೆ ಎಂದು ಸದ್ಯದ ವರದಿಗಳ ಪ್ರಕಾರ ತಿಳಿದು ಬಂದಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700