ಬೀದರ್: ಮಹಾರಾಷ್ಟ್ರದ ಉದಗಿರ್ ನಲ್ಲಿ ಹಕ್ಕಿ ಜ್ವರ ಹೆಚ್ಚಳವಾಗಿರುವ ಹಿನ್ನೆಲೆ ಬೀದರ್ ನಲ್ಲಿ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ ಮಾಡಲಾಗಿದೆ. ಬೀದರ್ ಜಿಲ್ಲೆಯ ಗಡಿ ತಾಲೂಕು ಕಮಲನಗರ, ಭಾಲ್ಕಿ, ಬಸವಕಲ್ಯಾಣ ತಾಲೂಕುಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರದ ಉದಗಿರನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಉದಗಿರನಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟಕ್ಕೆ ನಿಷೇಧಿಸಿ ಜಿಲ್ಲಾ ಮಟ್ಟದ ಪ್ರಾಣಿ ಜನ್ಯರೋಗಗಳ ತುರ್ತು ನಿರ್ವಹಣಾ ಸಮಿತಿ ಅಧ್ಯಕ್ಷರಾದ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉದಗಿರ ತಾಲೂಕಿನಲ್ಲಿ ಹಕ್ಕಿ ಜ್ವರ ದೃಢಪಟ್ಟಿರುವ ಕಾರಣ, ರೋಗವು ಇನ್ನಿತರ ಸ್ಥಳಗಳಿಗೆ ಹರಡದಂತೆ ಮುಂಜಾಗೃತಾ ಕ್ರಮವಾಗಿ, ಸರ್ಕಾರದ ಅಧಿನಿಯಮದಡಿ ಉದಗಿರದಿಂದ ಕೋಳಿ, ಕೋಳಿಮಾಂಸ, ಮೊಟ್ಟೆ, ಕೋಳಿ ಗೊಬ್ಬರ ಇವುಗಳ ಸಾಗಾಣಿಕೆಯನ್ನು ತಡೆಗಟ್ಟಲು ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲು ತಕ್ಷಣದಿಂದ ಜಾರಿಗೆ ಬರುವಂತೆ 15 ದಿನಗಳ ವರೆಗೆ ಇಲ್ಲವೇ ಮುಂದಿನ ಆದೇಶದವರೆಗೆ ಜಾರಿಗೊಳಿಸಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4