ಬಳ್ಳಾರಿ: ಬಳ್ಳಾರಿಯಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ. ಈವರೆಗೂ 20,000ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಕಪ್ಪಗಲ್ಲುವಿನ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 3 ದಿನಗಳ ಹಿಂದೆ 8,000 ಕೋಳಿಗಳು ಸಾವನ್ನಪ್ಪಿದ್ದವು. ಇದೀಗ ಮತ್ತಷ್ಟು ಕೋಳಿಗಳು ಸಾವನ್ನಪ್ಪಿದೆ.
ಕುರೇಕೊಪ್ಪ ಮತ್ತು ಕಪ್ಪಗಲ್ಲು ಕೋಳಿ ಸಾಕಣೆ ಕೇಂದ್ರಗಳಲ್ಲಿ ಸಾವಿರಾರು ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿವೆ ಎಂದು ಜಿಲ್ಲಾಧಿಕಾರಿಗಳು ದೃಢಪಡಿಸಿದ್ದಾರೆ.
ಈ ನಡುವೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿ, ಹಕ್ಕಿ ಜ್ವರಕ್ಕೆ ಕಾರಣವಾಗಿರುವ H5N1 ಸೋಂಕು ಹರಡುವಿಕೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4