ಭಾರತದಲ್ಲಿ ಬೇಸಿಗೆ ಬಿಸಿಲು ವಿಪರೀತವಾಗಿರುದರಿಂದ . ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಪರಿಸ್ಥಿತಿ ಇದೆ. ಹಲವು ನಗರಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ದೆಹಲಿಯ ಬಹುತೇಕ ಎಲ್ಲಾ ಭಾಗವು ತೀವ್ರ ಶಾಖದ ಪರಿಣಾಮದಿಂದ ಅಪಾಯದಲ್ಲಿದೆ ಎಂದು ಇತ್ತೀಚೆಗಷ್ಟೆ ವರದಿಯಾಗಿದೆ. ಮೊಬೈಲ್ಗಳು ಸಿಕ್ಕಾಪಟ್ಟೆ ಹೀಟ್ ಆಗುತ್ತಿದೆ. ಇದರಿಂದ ಮೊಬೈಲ್ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತಿದೆ. ಈಗಿರುವ ಫಾಸ್ಟ್ ಚಾರ್ಜರ್ಗಳಿಂದ ಬೇಗನೆ ಬಿಸಿ ಆಗುವ ಮೊಬೈಲ್ಗಳು ಬಿಸಿಲಿನಿಂದ ಇನ್ನಷ್ಟು ಹೆಚ್ಚಾಗಿ ಹೀಟ್ ಆಗುತ್ತಿದೆ.
ಮೊಬೈಲ್ ಅತೀಯಾಗಿ ಬಿಸಿಯಾಗಲು ಅಥವಾ ಬ್ಲಾಸ್ಟ್ ಆಗಲು ಮುಖ್ಯ ಕಾರಣ ಚಾರ್ಜ್ ಆಗುತ್ತಿರುವಾಗಲೇ ಮೊಬೈಲ್ ಬಳಕೆ ಮಾಡುವುದು. ಕಳೆದ ವಾರವಷ್ಟೆ ಕೇರಳದಲ್ಲಿ ಎಂಟು ವರ್ಷದ ಬಾಲಕಿ ಮೊಬೈಲ್ ಅನ್ನು ಚಾರ್ಜ್ಗೆ ಹಾಕಿ ವಿಡಿಯೋ ನೋಡುವಾಗ ಬ್ಲಾಸ್ಟ್ ಆಗಿ ಪ್ರಾಣ ಕಳೆದುಕೊಂಡ ಬಗ್ಗೆ ಸುದ್ದಿಯಾಗಿತ್ತು. ಚಾರ್ಜ್ಗೆ ಹಾಕಿ ಮೊಬೈಲ್ ಉಪಯೋಗಿಸಿದಾಗ RAM ಸೇರಿದಂತೆ ಪ್ರೊಸೆಸರ್ಗಳು ಎಲ್ಲವೂ ಕಾರ್ಯ ನಿರ್ವಹಿಸುತ್ತಲೇ ಇರುತ್ತದೆ. ಹೀಗಾಗಿ ಮೊಬೈಲ್ ಬೇಗನೇ ಬಿಸಿಯಾಗುತ್ತದೆ. ತಾಪಮಾನ ಕೂಡ ಅಧಿಕವಿರುವ ಕಾರಣ ಹೆಚ್ಚಿನ ಸಂದರ್ಭದಲ್ಲಿ ಇದು ಬ್ಲಾಸ್ಟ್ ಕೂಡಾ ಆಗುತ್ತದೆ. ಚಾರ್ಜ್ ಮಾಡುವಾಗ ಕೆಲವು ಫೋನ್ಗಳು ಹೆಚ್ಚಿನ ಶಾಖವನ್ನು ಉತ್ಪಾದಿಸುತ್ತವೆ ಎಂಬುದು ನಿಮಗೆ ಗೊತ್ತಿರಲಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA