ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಸರ್ಕಾರ ಅಂಥವರನ್ನು ಬಲಿ ಹಾಕೇ ಹಾಕುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಯಾರೇ ಭಾಗಿಯಾಗಿದ್ದರೂ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ನಾಯಕರ ಬಳಿ ದಾಖಲೆಗಳಿದ್ದರೆ ಇಡಿ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಗೆ ನೀಡಲು ಹಿಂದೇಟು ಹಾಕುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.ಈ ಪ್ರಕರಣದಲ್ಲಿ ಯಾರೇ ಇದ್ದರೂ ಅವರನ್ನು ಬಿಡುವುದಿಲ್ಲ. ಇಬ್ಬರು ಇದ್ದಾರೆ, ಮೂವರು ಇದ್ದಾರೆ ಎಂದು ಹೇಳುವುದು ಬೇಡ. ಪ್ರಕರಣದಲ್ಲಿ ಭಾಗಿಯಾದವರ ಹೆಸರು ಗೊತ್ತಿದ್ದರೆ ಬಹಿರಂಗಪಡಿಸಿ ಎಂದು ಸವಾಲು ಹಾಕಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700