ಕೊಡಗು: ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್ ಗೌಡ ಸೋಲನುಭವಿಸಿದ್ದಾರೆ.
ಕೊಡಗು ಕ್ಷೇತ್ರದಲ್ಲಿ ಒಟ್ಟು 1,229 ಮತಗಳಿದ್ದು, 105 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಸುಜಾ ಕುಶಾಲಪ್ಪ 705 ಮತಗಳನ್ನು ಪಡೆದಿದ್ದು, ಡಾ.ಮಂಥರ್ ಗೌಡ 603 ಮತಗಳನ್ನು ಪಡೆದುಕೊಂಡಿದ್ದರು.
ಒಟ್ಟು 1,224 ಮತಗಳು ಚಲಾವಣೆಯಾಗಿದ್ದು, 17 ಮತಗಳು ಅನರ್ಹಗೊಂಡಿದೆ. ಜೆಡಿಎಸ್ ಅಭ್ಯರ್ಥಿ ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700