ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚುತ್ತಿದ್ದಾರೆನ್ನಲಾದ ಫೋಟೋ ವೈರಲ್ ಆಗಿದೆ.
ಅಂಬೇವಾಡಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಅವರ ಸಹೋದರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ ಮನ್ನೋಳ್ಕರ್ ಹಣ ಹಂಚುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗದ ಹಿನ್ನೆಲೆಯಲ್ಲಿ ಹತಾಶರಾಗಿ ಹಣ ಹಂಚುವ ಮೂಲಕ ಕಾರ್ಯಕರ್ತರು ಹಾಗೂ ಮತದಾರರನ್ನು ಸೆಳೆಯುವ ಯತ್ನ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ಈ ಕುರಿತು ಚುನಾವಣೆ ಅಧಿಕಾರಿಗಳು ವಿಚಾರಣೆ ನಡೆಸಿದರೆ ಸಂಪೂರ್ಣ ವಿವರ ಬಹಿರಂಗವಾಗಬಹುದು ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


