ಬೆಂಗಳೂರು: ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಆರ್ ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗ ಹಾಗೂ ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ ಅವರು ಸಚಿನ್ ಪಂಚಾಲ್ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ., ಪೊಲೀಸರು ಪ್ರಕರಣ ದಾಖಲಿಸಿರುವುದರಿಂದ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿದೆ.
ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯ ಅವರು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ನಿರತರಾಗಿರುವಾಗ, ಅವರ ತವರು ಕ್ಷೇತ್ರ ಕಲಬುರಗಿಯಲ್ಲಿ ಪರಿಸ್ಥಿತಿ ವಿರುದ್ಧವಾಗಿದೆ. ಮಹಾನ್ ಸಾಂವಿಧಾನಿಕ ತಜ್ಞರಂತೆ ವರ್ತಿಸುವ ಅವರ ಮಗ ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಇದೊಂದೇ ಅಲ್ಲ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಟ್ರಸ್ಟ್ಗಳು ಮತ್ತು ಭೂ ಹಗರಣಗಳ ವಿವರಗಳೂ ಒಂದರ ಹಿಂದೆ ಒಂದರಂತೆ ಹೊರಬೀಳುತ್ತಿವೆ ಎಂದು ಟೀಕಿಸಿದ್ದಾರೆ.
ಬಹುಕೋಟಿ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದರಿಂದ, ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಲು ಬಿಜೆಪಿ ಇದೇ ತಂತ್ರವನ್ನು ಅನುಸರಿಸುತ್ತಿದೆ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx