nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬ್ರಾಹ್ಮಣ ಸಮಾಜವೇ ಕಾರಣ: ಅಭಯ ಪಾಟೀಲ
    ರಾಜ್ಯ ಸುದ್ದಿ February 13, 2023

    ಬಿಜೆಪಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬ್ರಾಹ್ಮಣ ಸಮಾಜವೇ ಕಾರಣ: ಅಭಯ ಪಾಟೀಲ

    By adminFebruary 13, 2023No Comments3 Mins Read
    brahmana

    ಬೆಳಗಾವಿ:  ಭಾರಪತೀಯ ಜನತಾ ಪಾರ್ಟಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬ್ರಾಹ್ಮಣ ಸಮಾಜವೇ ಕಾರಣ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದ್ದಾರೆ.

    ಇಲ್ಲಿನ ಭಾಗ್ಯ ನಗರದ ಸಿಟಿ ಹಾಲ್‌ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬ್ರಾಹ್ಮಣ ಸಮಾಜದ ಸಾಧಕರಿಗೆ ವಿಪ್ರಶ್ರೀ ಪ್ರಶಸ್ತಿ ಪ್ರಧಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,  ಬ್ರಾಹ್ಮಣ ಸಮುದಾಯ ಸ್ವಾಭಿಮಾನಿ ಸಮುದಾಯವಾಗಿದೆ. ಬಿಜೆಪಿ ಪಕ್ಷ ಬೆಳೆಯಲು ಬ್ರಾಹ್ಮಣ ಸಮುದಾಯದ ಕೊಡುಗೆ ದೊಡ್ಡದು. ಬ್ರಾಹ್ಮಣರಿಗೆ ಸೌಲಭ್ಯಗಳನ್ನು ಕೊಡುವಲ್ಲಿ ಹಿಂದೇಟು ಹಾಕುವುದು ಸರಿಯಲ್ಲ ಎಂದರು.


    Provided by
    Provided by

    ಬೆಳಗಾವಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಗಾಯತ್ರಿ ಭವನಕ್ಕೆ ಶಾಸಕರ ಅಭಿವೃದ್ಧಿ ನಿಧಿಯಿಂದ 10 ಲಕ್ಷ ರೂ. ಅನುದಾನ ನೀಡಿದ್ದೇನೆ. ಇನ್ನು 1ವಾರದೊಳಗೆ ಮತ್ತೆ 30 ಲಕ್ಷ ರೂ. ಅನುದಾನ ನೀಡುವುದಾಗಿ ಅವರು ತಿಳಿಸಿದರು.

    ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್. ಎಸ್. ಸಚ್ಚಿದಾನಂದಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯದಲ್ಲಿ ಬ್ರಾಹ್ಮಣರ ಜನಸಂಖ್ಯೆ 47.50 ಲಕ್ಷದಷ್ಟಿದೆ. ಆದರೆ ಒಗ್ಗಟ್ಟಿಲ್ಲದ ಕಾರಣ ಸಮಾಜದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. 2015 ರಲ್ಲಿ ನಡೆದ ಜನಗಣತಿಯ ವೇಳೆ ಬಹಳಷ್ಟು ಜನ ಬ್ರಾಹ್ಮಣ ಎಂದು ನಮೂದಿಸದೆ ತಮ್ಮ ಉಪ ಜಾತಿಯ ಹೆಸರು ಹೇಳಿದ್ದರಿಂದ ಬ್ರಾಹ್ಮಣರ ಸಂಖ್ಯೆ ಕಡಿಮೆ ಕಾಣುತ್ತಿದೆ. ನಾನು ಮಂಡಳಿಯ ಅಧ್ಯಕ್ಷನಾದ ಮೂರು ವರ್ಷದಲ್ಲಿ ರಾಜ್ಯದ ಉದ್ದಗಲಕ್ಕೆ ಸುತ್ತಿ ಮಾಹಿತಿ ಕಲೆ ಹಾಕಿದ್ದೇನೆ. ಪ್ರಸ್ತುತ ರಾಜ್ಯದಲ್ಲಿ ಬ್ರಾಹ್ಮಣರ ಜನಸಂಖ್ಯೆ ರಾಜ್ಯದಲ್ಲಿ 4.40 ರಷ್ಟಿದೆ ಎಂದು ಹೇಳಿದರು.

    ಬ್ರಾಹ್ಮಣರನ್ನು ಕೆಲವರು ವಿನಾಕಾರಣ ಅವಹೇಳನ ಮಾಡಿದರೂ ಸಹ ಸುಮ್ಮನಿರುತ್ತೇವೆ. ಇಂಥ ಅನ್ಯಾಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಿದೆ. ಹೋರಾಟ ಮಾಡಿದರೆ ಮಾತ್ರ ಪರಿಣಾಮ ಬೀರುತ್ತದೆ ಎಂಬುದಕ್ಕೆ ನಿದರ್ಶನಗಳಿವೆ. ಚೇತನ್ ಎಂಬುವವರು ಬ್ರಾಹ್ಮಣರನ್ನು ಭಯೋತ್ಪಾದಕರು ಎಂದು ಉಲ್ಲೇಖಿಸಿದ್ದರ ವಿರುದ್ಧ ರಾಜ್ಯಾದ್ಯಂತ 72 ಕಡೆ ಪ್ರತಿಭಟನೆ ಮಾಡಿ ದೂರು ದಾಖಲು ಮಾಡಿದ ಮೇಲೆ ಅವರು ಕ್ಷಮೆ ಕೇಳಿದ್ದಾರೆ.

    ಪೊಗರು ಕನ್ನಡ ಚಲನ ಚಿತ್ರದಲ್ಲಿ ಜನಿವಾರದ ಮೇಲೆ ಬೂಟುಗಾಲಿಡುವ ದೃಷ್ಯವಿತ್ತು. ಬ್ರಾಹ್ಮಣರನ್ನು ಅವಹೇಳನ ಮಾಡುವ ಸಂಭಾಷಣೆಗಳು ಇದ್ದವು. ಚಿತ್ರರದ ನಿರ್ದೇಶಕನನ್ನು ಕರೆದು ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ ಮೇಲೆ 14 ದೃಶ್ಯಗಳು, 28 ಸಂಭಾಷಣೆಗಳನ್ನು ತೆಗೆಯಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಸಹ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಬ್ರಾಹ್ಮಣರು ಒಗ್ಗಟ್ಟಾಗಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಅಂತವರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದರು.

    ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಯಾದ ಬಳಿಕ ಎಸ್‌ ಎಸ್‌ ಎಲ್‌ ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ 15 ಸಾವಿರ ರೂ. ಪುರಸ್ಕಾರ ನೀಡಲಾಗುತ್ತಿದೆ. ಆದರೆ ಬಹಳಷ್ಟು ವಿದ್ಯಾರ್ಥಿಗಳು ಅರ್ಜಿಯನ್ನೇ ಹಾಕುತ್ತಿಲ್ಲ. ಸ್ವ ಉದ್ಯೋಗ ಮಾಡುವವರಿಗೂ ಸಾಲ ಮತ್ತು ಸಹಾಯಧನ ಯೋಜನೆ ಜಾರಿಗೆ ತಂದಿದ್ದೇನೆ. ಅದಕ್ಕೂ ನಿರೀಕ್ಷಿತ ಸಂಖ್ಯೆಯಲ್ಲಿ ಅರ್ಜಿ ಬಂದಿಲ್ಲ.  ಈ ವರ್ಷ ೮-೯ ಸಾವಿರ ಅರ್ಜಿಗಳ ನಿರೀಕ್ಷೆ ಇತ್ತು. ಆದರೆ ಕೇವಲ ಒಂದೂವರೆ ಸಾವಿರ ಅರ್ಜಿಗಳು ಬಂದಿವೆ. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಹಾಕಬೇಕು. ಫೆ.26ರವರೆಗೂ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶವಿದೆ ಎಂದರು.

    ಆರ್ಥಿಕವಾಗಿ ಹಿಂದುಳಿದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 1 ಲಕ್ಷ ರೂ. ಸಾಲ ಯೋಜನೆ, ಗಾಯತ್ರಿ ಮಹಿಳಾ ಸ್ವ ಸಹಾಯ ಸಂಘ ರಚಿಸಿಕೊಂಡವರಿಗೆ 1 ಲಕ್ಷ ರೂ. ಮೂಲ ಬಂಡವಾಳ, ಐಎಎಸ್, ಐಪಿಎಸ್ ಅಧ್ಯಯನಕ್ಕೆ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ತರಲಾಗಿದೆ. ಬ್ರಾಹ್ಮಣ ಸಮುದಾಯದವರು ಸರಕಾರದ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬ್ರಾಹ್ಮಣ ಸಮುದಾಯದ ಎಸ್.ಎಂ. ಕುಲಕರ್ಣಿ, ಪ್ರಿಯಾ ಪುರಾಣಿಕ, ಶಿರೀಶ ಕಾನೆಟ್ಕರ್, ಎಲ್. ಎಸ್. ಶಾಸ್ತ್ರಿ, ಎಂ.ಕೆ. ಹೆಗಡೆ, ಮಧು ದೇಸಾಯಿ, ಪ್ರಸಾದ ಕುಲಕರ್ಣಿ, ಭಾರತಿ ಕುಲಕರ್ಣಿ, ಅರವಿಂದ ಆಚಾರ್ಯ, ಶ್ರೀಕಾಂತ ಕುಲಕರ್ಣಿ ಅವರಿಗೆ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಬೆಳಗಾವಿ, ಚಿಕ್ಕೋಡಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

    ಬೆಳಗಾವಿ ಜಿಲ್ಲಾ ಅಖಿಲ ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಸ್. ಎಂ. ಕುಲರ್ಣಿ ಅಧ್ಯಕ್ಷತೆ ವಹಿಸಿದ್ದರು. ವಸಂತ ನಾಡಜೋಶಿ ಪ್ರಸ್ತಾವಿಕ ಮಾತನಾಡಿದರು. ಪ್ರಿಯಾ ಪುರಾಣಿಕ, ಆರ್. ಎಸ್. ಮುತಾಲಿಕ್, ವತ್ಸಲಾ ನಾಗೇಶ,  ಜಗನ್ನಾಥ ಕುಲಕರ್ಣಿ, ಶಿರಿಷ ಕಾನೆಟ್ಕರ್, ಗೋವಿಂದರಾವ್ ಫಟಕೆ, ಜಗದೀಶ ಹುನಗುಂದ, ಮಹಾನಗರ ಪಾಲಿಕೆ ಸದಸ್ಯರಾದ ಜಯತೀರ್ಥ ಸವದತ್ತಿ, ವಾಣಿ ಜೋಶಿ ಮೊದಲಾದವರು ಇದ್ದರು.

    ಇದೇ ವೇಳೆ ಬೆಳಗಾವಿ ಬ್ರಾಹ್ಮಣ ಸಂಘ ಹಾಗೂ ಹವ್ಯಕ ಸಂಘದ ವತಿಯಿಂದ ಸಚ್ಚಿದಾನಂದ ಮೂರ್ತಿ ಅವರನ್ನು ಸತ್ಕರಿಸಲಾಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್‌ ವುಡ್ ನಟಿ ರನ್ಯಾ ರಾವ್ ಅವರಿಗೆ…

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.