ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿಂದು ಬಿಜೆಪಿ ಬೃಹತ್ ಜನಸ್ಪಂದನಾ ಸಮಾವೇಶ ನಡೆಯಲಿದ್ದು, ಸರ್ಕಾರದ ಮೂರು ವರ್ಷದ ಸಾಧನೆಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಶಕ್ತಿ ಪ್ರದರ್ಶಕ್ಕೆ ವೇದಿಕೆ ಸಜ್ಜಾಗಿದೆ.
40 ಎಕರೆ ಜಾಗದಲ್ಲಿ ಜನಸ್ಪಂದನಾ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ತೆರಳಲು ಬಿಜೆಪಿ ವಿಶೇಷ ಬಸ್ ವ್ಯವಸ್ಥೆಯನ್ನು ಮಾಡಿದೆ.
ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿರುವ ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ನಾಲ್ಕು ಜಿಲ್ಲೆಗಳ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇತ್ತ ಕಾಂಗ್ರೆಸ್ ಸಮಾವೇಶದ ವಿರುದ್ಧ ಕಿಡಿಕಾರಿದ್ದು, ಇದು ಬಿಜೆಪಿ ಭ್ರಷ್ಟೋತ್ಸವ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


