ಸರಗೂರು: ತಾಲ್ಲೂಕಿನ ಪಟ್ಟಣಕ್ಕೆ ಚಾಮರಾಜನಗರ ಮೀಸಲು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾದ ಬಾಲರಾಜು ಅವರ ಪುತ್ರ ಯೋಗಾಂಶು ಇಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ನಂತರ ಮಾತನಾಡಿದ ಅವರು, ಕಳೆದ ಐದು ವರ್ಷದಲ್ಲಿ ಪ್ರಧಾನ ಮಂತ್ರಿಯವರು ರಾಷ್ಟ್ರ ಹಾಗೂ ರಾಜ್ಯ ಅಭಿವೃದ್ಧಿಗಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ಕೂಡಾ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಇನ್ನೂ ಅಭಿವೃದ್ಧಿ ಮಾಡುವ ಕನಸು ಕಂಡಿದ್ದಾರೆ ಎಂದರು.
ಅದೇ ರೀತಿ ನಮ್ಮ ತಂದೆಯಾದ ಬಾಲರಾಜು ರವರನ್ನು ಗೆಲ್ಲಿಸಿಕೊಟ್ಟರೆ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಿಕೊಂಡರು.
ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರು ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮಿಸಿದ್ದಾರೆ. ನೀರಾವರಿ, ಕುಡಿಯುವ ನೀರು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ಒದಗಿಸಿದ್ದಾರೆ. ಕ್ಷೇತ್ರದ ಅಭಿವೃದ್ದಿಗಾಗಿ ಏ.26 ರಂದು ನಡೆಯುವ ಚುನಾವಣೆಯಲ್ಲಿ ನಮ್ಮ ಬಾಲರಾಜುರವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಪಟ್ಟಣದ ಟೌನ್ ಕಾರ್ಯದರ್ಶಿ ಪ್ರಭಾವಿ ಯುವ ಮುಖಂಡ ನಾಗರಾಜು ಬೆಂಬಲಿಗರೊಂದಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಹಾಗೂ ತಾಲೂಕು ಅಧ್ಯಕ್ಷ ಗುರುಸ್ವಾಮಿ ಇವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಪಕ್ಷದ ಅಧ್ಯಕ್ಷ ಗುರುಸ್ವಾಮಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಸುನಂದರಾಜು, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಮಾಜಿ ಅಧ್ಯಕ್ಷ ಸಿ.ಕೆ. ಗಿರೀಶ, ಗ್ರಾ.ಪಂ. ಉಪಾಧ್ಯಕ್ಷ ನಟರಾಜ್, ಮುಖಂಡರಾದ ಹಂಚೀಪುರ ಗಣಪತಿ, ಪೇಂಟ್ ನಾಗರಾಜು, ಗೊವಿಂದ ಮಸಹಳ್ಳಿ, ಗೋವಿಂದರಾಜು, ಶಶಿಕುಮಾರ್, ನಂಜಪ್ಪ, ಮಧು, ಲೋಕೇಶ್, ಅನಿಲ್, ಇನ್ನೂ ಕೆಲವು ಮುಖಂಡರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA