ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಹೈಕಮಾಂಡ್ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಚಿವ ವಿ.ಸೋಮಣ್ಣ ಜಿಲ್ಲೆಯಲ್ಲಿ ಪ್ರಮುಖ ನಾಯಕರಗಳನ್ನು ಭೇಟಿಯಾಗಿ ಬೆಂಬಲವನ್ನು ಕೇಳುತ್ತಿದ್ದಾರೆ.
ಮುಖ್ಯವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವಿ ಸೋಮಣ್ಣ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಕೂಡ ಹಾಜರಿದ್ದರು ಮುಂಬರುವ ಚುನಾವಣೆಯ ಕಾರ್ಯತಂತ್ರದ ಭಾಗವಾಗಿ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತವೆ.
ಇನ್ನೊಂದೆಡೆ ಲೋಕಸಭೆ ಮಾಜಿ ಉಪಸಭಾಪತಿ ದಿ. ಮಲ್ಲಿಕಾರ್ಜುನಯ್ಯ ರವರು ಶಿವೈಕ್ಯರಾಗಿ ದಶಮಾನದ ಹಿನ್ನಲೆಯಲ್ಲಿ ಅವರ ಸ್ವಗೃಹಕ್ಕೆ ತೆರಳಿ ನಮನ ಸಲ್ಲಿಸಿ, ಮಲ್ಲಿಕಾರ್ಜುನ್ ಅವರ ಪತ್ನಿ ಜಯಮ್ಮ ಮಲ್ಲಿಕಾರ್ಜುನಯ್ಯ ರವರ ಆಶೀರ್ವಾದ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


