ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಸ್ವಗ್ರಾಮ ಯಾದಗಿರಿಯ ಕೊಡೇಕಲ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ಹಿನ್ನೆಲೆ ಕೊಡೇಕಲ್, ಹುಣಸಗಿ ಹಾಗೂ ಸುರಪುರದಲ್ಲಿ ಖಾಕಿ ಪಡೆ ಸುತ್ತುವರಿದಿದೆ. ಗಲಾಟೆ ನಿಯಂತ್ರಣಕ್ಕಾಗಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಈಗಾಗಲೇ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದು, ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸೆಕ್ಷನ್ 144 ಕಲಂ ಜಾರಿಯಾಗಿದೆ.
ಸಂಘರ್ಷ ಹಿನ್ನೆಲೆ ಗುರುವಾರ ರಾತ್ರಿ ಕೊಡೇಕಲ್‌ಗೆ ಆಗಮಿಸಿರುವ ಕಲಬುರಗಿ ಈಶಾನ್ಯ ವಲಯ ಐಜಿಪಿ ಅನುಪಮ ಅಗರವಾಲ್ ಹಾಗೂ ಯಾದಗಿರಿ ಎಸ್‌ಪಿ ಡಾ. ಸಿಬಿ ವೇದಮೂರ್ತಿ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ.
ನಿಷೇಧಾಜ್ಞೆ ಜಾರಿ ಹಿನ್ನೆಲೆ ಇಡೀ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ 3 ಕೆಎಸ್‌ಆರ್‌ಪಿ ತುಕಡಿ, 1 ಪ್ಯಾರಾ ಮಿಲಿಟರಿ ಫೋರ್ಸ್ ಕಂಪನಿ, 2 ಡಿಎಸ್‌ಪಿ, 5 ಸಿಪಿಐ, 10 ಸಿಪಿಐ 100 ಕಾನ್ಸ್ಟೇಬಲ್ ನಿಯೋಜನೆ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


