ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ.
ಬ್ರಿಜ್ ಭೂಷಣ್ ಒಪ್ಪಿದರೆ ಅವರ ಕುಟುಂಬದಲ್ಲಿ ಬೇರೆ ಯಾರಿಗಾದರೂ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿ ತೊಂದರೆಗೆ ಸಿಲುಕಿದ್ದರು. ಕೇಸರ್‌ಗಂಜ್ ಕ್ಷೇತ್ರದಿಂದ ಅವರಿಗೆ ಲೋಕಸಭೆ ಚುನಾವಣೆಗೆ ಪಕ್ಷ ಟಿಕೆಟ್ ನೀಡದಿರುವ ಬಗ್ಗೆ ಮೊದಲಿನಿಂದಲೂ ಊಹಾಪೋಹ ಇತ್ತು ಎನ್ನಲಾಗಿದೆ.
ಮತ್ತೊಂದೆಡೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಪಾಳಯದಲ್ಲಿ ಸಂಸದರ ಕಿರಿಯ ಪುತ್ರ ಹಾಗೂ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಅಧ್ಯಕ್ಷ ಕರಣ್ ಭೂಷಣ್ ಶರಣ್ ಸಿಂಗ್ ಹೆಸರು ಚರ್ಚೆಯಲ್ಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA