ಬಿಜೆಪಿ ಮುಖಂಡರ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ಪಕ್ಷದ ವಿರೋಧಿ ಹೇಳಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾರಣ ಕೇಳಿ ನೊಟೀಸ್ ಜಾರಿ ಮಾಡಲಾಗಿದೆ.
ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ನೊಟೀಸ್ ಜಾರಿ ಮಾಡಿದ್ದಾರೆ. ಈ ನೋಟಿಸ್ನಲ್ಲಿ ” ಪಕ್ಷದ ವಿರೋಧಿ 11 ಹೇಳಿಕೆ ನೀಡಿರುವ ಕಾರಣ ತಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಒಂದು ವಾರದೊಳಗಾಗಿ ಲಿಖಿತ ಉತ್ತರ ನೀಡಬೇಕು ” ಎಂದು ಸೂಚಿಸಲಾಗಿದೆ.
ಪಕ್ಷವು ಹಲವು ಬಾರಿ ತಿಳಿ ಹೇಳಿದರೂ ಸಹ ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಯಾವ ಕಾರಣಕ್ಕಾಗಿ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಕಾರಣ ನೀಡುವಂತೆ ” ನೊಟೀಸ್ನಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


