ಉತ್ತರ ಕನ್ನಡದ ಅನಂತಕುಮಾರ್ ಅವರು ಬಿಜೆಪಿ ಫೈರ್ ಬ್ರಾಂಡ್ ಆಗಿದ್ದು ಮೂರು ಬಾರಿ ಸಂಸದರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ! ಇದೀಗ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ!
ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ.
ಮಾಜಿ ಸಂಸದರು ಮತ್ತು ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಗಿರಬಹುದೆಂದು ಶಂಕಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA