ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಜನರಿಂದ ದೇಣಿಗೆ ಇಟ್ಟಿದ್ದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ನಮ್ಮ ಪಕ್ಷ ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬಿಜೆಪಿಯು ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದಾಯ ತೆರಿಗೆ ಮೂಲಕ ಪಕ್ಷಕ್ಕೆ ಭಾರೀ ದಂಡವನ್ನು ವಿಧಿಸುತ್ತಿದೆ. ಆದರೆ ಅವರು ಸಾವಿರಾರು ಕೋಟಿ ರೂ. ಬಹಿರಂಗಪಡಿಸಲು ಸಿದ್ಧರಿಲ್ಲ. ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಹೊರತಾಗಿಯೂ ಚುನಾವಣಾ ಬಾಂಡ್ ಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಜನರು ದೇಣಿಗೆಯಾಗಿ ನಮ್ಮ ಪಕ್ಷಕ್ಕೆ ಹಣ ನೀಡಿದ್ದಾರೆ. ಆದರೆ ಬಿಜೆಪಿಯವರು ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಈಗ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ. ಆದರೆ ಬಿಜೆಪಿಯವರು ಪಡೆದಿರುವ ಚುನಾವಣಾ ಬಾಂಡ್ ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ. ಏಕೆಂದರೆ ಅವರ ಕಳ್ಳತನ ಹೊರಗೆ ಬರಬಹುದು. ಅವರ ತಪ್ಪು ಕೆಲಸಗಳು ಹೊರಬರಬಹುದು ಎಂದು ಖರ್ಗೆ ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


