ಕಾವೇರಿಗಾಗಿ ಪ.26ರಂದು (ಮಂಗಳವಾರ) ಕರೆ ನೀಡಿರುವ ‘ಬೆಂಗಳೂರು ಬಂದ್’ ಗೆ ಬಿಜೆಪಿ ಸಂಪೂರ್ಣ ಬೆಂಬಲ ಘೋಷಿಸಿದೆ. ಹೋರಾಟಕ್ಕೆ ಕೈ ಜೋಡಿಸುವಂತೆ ಪಕ್ಷದ ಕಾರ್ಯಕರ್ತರಿಗೂ ಕರೆ ನೀಡಿದೆ. ಬಂದ್ ಗೆ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳ ಜೊತೆ ರಾಜಕೀಯ ಪಕ್ಷದ ಬಲವೂ ಸಿಕ್ಕಿದಂತಾಗಿದೆ.
ಬಿಜೆಪಿ ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಹಾಗು ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕ ಒಕ್ಕೂಟಗಳು, ಹೋಟೆಲ್ ಸಂಘ ಸಂಸ್ಥೆಗಳು, ಕೆಲವು ಖಾಸಗಿ ಶಾಲೆಗಳು, ಇನ್ನು ಹಲವಾರು ವಿಭಾಗದಿಂದ ವ್ಯಾಪಕ ಬೆಂಬಲ ಸೂಚಿಸಿದ್ದಾರೆ.


