ಬೆಂಗಳೂರು/ತುಮಕೂರು: ಮಾಜಿ ಸಂಸದ ಎಸ್.ಪಿ.ಮುದ್ದ ಹನುಮಗೌಡ,ಹಿರಿಯ ನಟ ಶಶಿಕುಮಾರ್,ಮಾಜಿ ಐಎಎಸ್ ಅಧಿಕಾರಿ ಬಿ.ಹೆಚ್.ಅನಿಲ್ ಕುಮಾರ್ ಸೇರಿದಂತೆ ಹಲವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಅಶ್ವಥ್ ನಾರಾಯಣ್, ರಾಜ್ಯಸಭಾ ಸದಸ್ಯ ಜಗ್ಗೇಶ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಿ.ಪಿ.ಯೋಗೇಶ್ವರ್, ಲಕ್ಷ್ಮಣ್ ಸವದಿ, ಗೋವಿಂದ ಕಾರಜೋಳ, ಶಾಸಕ ಮಸಾಲೆ ಜಯರಾಂ ಇನ್ನು ಮುಂತಾದ ರಾಜ್ಯಮಟ್ಟದ ಮುಖಂಡರುಗಳ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ತುಮಕೂರು ಜಿಲ್ಲೆಯ ಬಲಿಷ್ಟ ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಹಾಗೂ ನಿವೃತ್ತ ನ್ಯಾಯಮೂರ್ತಿಗಳಾದ ಎಸ್ ಪಿ ಮುದ್ದಹನುಮೇಗೌಡ, ಲೋಕೋಪಯೋಗಿ ಇಲಾಖೆಯ ನಿವೃತ್ತ ಐ ಎ ಎಸ್ ಅಧಿಕಾರಿ ಬಿ.ಹೆಚ್.ಅನಿಲ್ ಕುಮಾರ್, ಚಲನ ಚಿತ್ರ ನಟ ಹಾಗೂ ಮಾಜಿ ಸಂಸದರಾದ ಶಶಿಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ, ತೆಂಗು ಮತ್ತು ನಾರು ಮಂಡಳಿಯ ಮಾಜಿ ಅಧ್ಯಕ್ಷ ವೆಂಕಟಾಚಲಯ್ಯ, ರೈತ ಮುಖಂಡ ಸಂಜೀವ ರೆಡ್ಡಿ, ದಲಿತ ಮುಖಂಡರಾದ ದಾಡಿ ವೆಂಕಟೇಶ್ ಮೂರ್ತಿ, ಕಲ್ಬುರ್ಗಿ ಜಿಲ್ಲೆಯ ಹನುಮಂತ ರಾವ್ ಬಿಜೆಪಿಗೆ ಸೇರ್ಪಡೆಗೊಂಡರು.
ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ಪಕ್ಷದ ಬಾವುಟವನ್ನು ಹಿಡಿಯುವುದರ ಮೂಲಕ ಬಿಜೆಪಿ ನಾಯಕರು ಇವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


