ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದಿದ್ದಾರೆ.
ಸಚಿವರೊಬ್ಬರು ಶೇ. 40 ಕಮಿಷನ್ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು 40 ಪರ್ಸೆಂಟ್ ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. ಃಎP ಪ್ರಾಯೋಜಿತ PSI ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5